ಟಿಪ್ಪು ಜಯಂತಿ ಆಚರಣೆ ವಿರೋಧಕ್ಕೆ ಪುಡಿಯಾಯ್ತು ಕಾರಿನ ಗಾಜು..!

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಗೆ ಕೆಲವು ಮೂಲಗಳಿಂದ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ರಾಮ್ ಎಂಬವರು ಕಳೆದ ಪಟ್ಟಣ ಠಾಣೆಗೆ ದೂರು ನೀಡಿದ್ದರು.

ಇದರಿಂದ ಕುಪಿತಗೊಂಡ ‘ಟಿಪ್ಪು ಜಯಂತಿ ಆಚರಣೆ’ಯ ಬೆಂಬಲಿಗರು ಬೆಂಗಳೂರು ಹೊರವಲಯ ನೆಲಮಂಗಲದ ಮಾರುತಿ ಬಡಾವಣೆಯಲ್ಲಿ ತಡ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಸಫಾರಿ ಕಾರಿನ ಗಾಜು ಪುಡಿ ಮಾಡಿರುವ ಘಟನೆ ನಡೆದಿದೆ.

ಈ ಪ್ರಕರಣ ಬೆಳಗ್ಗೆ ಬೆಳಕಿಗೆ ಬಂದಿದ್ದು ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.